ಬೆಂಗಳೂರು:
ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ರೈಲು ಸೇವೆ ಅವಧಿ ವಿಸ್ತರಣೆ ಕುರಿತು ಮಹತ್ವದ ಮಾಹಿತಿ ನೀಡಿದೆ.ಹಾಲಿ ಮಹಿಳಾ ಪ್ರೀಮಿಯರ್ ಲೀಗ್ T-20 ಕ್ರಿಕೆಟ್ ನ ಪಂದ್ಯಗಳ ದಿನದಂದು ನಮ್ಮ ಮೆಟ್ರೋ ರೈಲು ಸೇವೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.
ಟಾಟಾ ಮಹಿಳಾ ಪ್ರೀಮಿಯರ್ ಲೀಗ್ 2025 ಟಿ-20 ಕ್ರಿಕೆಟ್ ಪ೦ದ್ಯಗಳು ಬೆ೦ಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ. ಹೀಗಾಗಿ ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ ಬಿಎಂಆರ್ಸಿಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ ಎಂದು ಹೇಳಿದೆ.