ನವದೆಹಲಿ:
ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಹೊರೆಯಾಗಿವೆ ಎಂಬ ಮಾತುಗಳು ಕಾಂಗ್ರೆಸ್ ಸರ್ಕಾರದ ಸಚಿವರಿಂದಲೇ ಬರುತ್ತಿವೆ.ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಕುರಿತು ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ ಎಂದು ಮಂಗಳವಾರ ಹೇಳಿದರು. ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು. ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ,’’ ಎಂದು ಶಿವಕುಮಾರ್ ಹೇಳಿದರು. ‘ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗಿವೆ ಎಂಬ ಗೃಹ ಸಚಿವರ ಹೇಳಿಕೆಗೆ ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.