ಇನ್ನು ರಾಜ್ಯಸಭೆಯ ಕಲಾಪವನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ 25,700 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಅಮಾನ್ಯಗೊಳಿಸಿರುವ ಕುರಿತು ತೀವ್ರ ಗದ್ದಲವುಂಟಾಗಿದ್ದು, ಕಲಾಪವನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಲಾಗಿತ್ತು.
ಕಲಾಪ ಆರಂಭವಾಗುತ್ತಿದ್ದಂತೆಯೇ ಜಗದೀಪ್ ಧನಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಯಿತು. ಬಳಿಕ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ವಿಚಾರವನ್ನು ಪ್ರಸ್ತಾಪಿಸಿದ ಸದಸ್ಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು .ಆಡಳಿತ ಪಕ್ಷವು ಈ ವಿಷಯವನ್ನು ಎತ್ತಿದಾಗ ಟಿಎಂಸಿಯ ಡೆರೆಕ್ ಒ’ಬ್ರೇನ್ ಪ್ರತಿಕ್ರಿಯಿಸಲು ಪ್ರಯತ್ನಿದರು. ಈ ವೇಳೆ ಗದ್ದಲ ಉಂಟಾಯಿತು, ಬಳಿಕ ಜಗದೀಪ್ ಧನಕರ್ ಅವರು ಮಧ್ಯಾಹ್ನ 12 ಗಂಟೆಗೆ, ನಂತರ ಮಧ್ಯಾಹ್ನ 1 ಗಂಟೆಗೆ ಕಲಾಪವನ್ನು ಮುಂದೂಡಿದರು.
ಇಜೇ ವೇಳೆ ಸೋನಿಯಾ ಗಾಂಧಿಯವರ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ಸಂಸತ್ತಿನ ಹಿರಿಯ ಸದಸ್ಯರು ಇಂತಹ ಆರೋಪಗಳನ್ನು ಮಾಡಿದಾಗ, ಅದು ಸಂಸದೀಯ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಘನತೆಯನ್ನು ಹಾಳು ಮಾಡುತ್ತದೆ. ಸದನದ ಕಲಾಪಗಳ ಸಮಗ್ರತೆಯನ್ನು ಪ್ರಶ್ನಿಸುವ ಅಂತಹ ಹೇಳಿಕೆಗಳು ಸೂಕ್ತವಲ್ಲ ಎಂದು ಹೇಳಿದರು.
ಈ ಹೇಳಿಕೆಗೆ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಲು ಆರಂಭಿಸಿದರು. ತೀವ್ರ ಗದ್ದಲ ಹಿನ್ನೆಲೆಯಲ್ಲಿ ಬಳಿಕ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಇನ್ನು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ನಿರ್ಣಯವನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿಲಾಗಿದೆ.ಪಕ್ಷಾತೀತ ಸದಸ್ಯರು ಈ ನಿರ್ಧಾರವನ್ನು ಬೆಂಬಲಿಸಿದರೆ, ರಾಜ್ಯದಲ್ಲಿ (ಮಣಿಪುರ) ಕಾನೂನು ಸುವ್ಯವಸ್ಥೆ ಮರುಸ್ಥಾಪಿಸಲು ಮತ್ತು ಹಿಂಸಾಚಾರವನ್ನು ತಡೆಯಲು ಕೇಂದ್ರ ವಿಫಲವಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಟೀಕಿಸಿದರು.
ಬಳಿಕ ನಿರ್ಣಯದ ಮೇಲಿನ ಚರ್ಚೆಯ ಕೊನೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಣಿಪುರದಲ್ಲಿ ಕಾದಾಡುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷಕ್ಕೆ ಶೀಘ್ರ ಪರಿಹಾರ ದೊರೆಯುವ ಭರವಸೆ ವ್ಯಕ್ತಪಡಿಸಿದರು.ಶಾಂತಿಯುತ ಪರಿಹಾರಕ್ಕಾಗಿ ಎರಡೂ ಸಮುದಾಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಈಗಾಗಲೇ ಎರಡು ಸಭೆಗಳು ನಡೆದಿವೆ. ಮೂರನೇ ಸಭೆ ಶೀಘ್ರದಲ್ಲೇ ನವದೆಹಲಿಯಲ್ಲಿ ನಡೆಯಲಿದೆ. ರಾಜ್ಯದಲ್ಲಿ ಸಹಜ ಸ್ಥಿತಿ ಮರಳಿ ತರಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು.