ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇ ಪಂದ್ಯ ನಡೆಯಲಿದೆ. ಈ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಫೆಬ್ರವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ-ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಪ್ರಪಂಚದಾದ್ಯಂತ ಚರ್ಚೆಯಾಗುತ್ತಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮುಂಬರುವ ಪಂದ್ಯಕ್ಕೆ ಮುಂಚಿತವಾಗಿ ನೆಟ್ಫ್ಲಿಕ್ಸ್, ಕ್ರಿಕೆಟ್ ಸಾಕ್ಷ್ಯಚಿತ್ರ ಸರಣಿಯಾದ ‘ದಿ ಗ್ರೇಟೆಸ್ಟ್ ರೈವಲ್ರಿ – ಇಂಡಿಯಾ ವರ್ಸಸ್ ಪಾಕಿಸ್ತಾನ್’ ಅನ್ನು ಬಿಡುಗಡೆ ಮಾಡಲಿದೆ. ಇದು ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಬಿಡುಗಡೆಯ ಒಂದು ವಾರದ ಮೊದಲು, ಒಟಿಟಿ ಪ್ಲಾಟ್ಫಾರ್ಮ್, ಸಾಕ್ಷ್ಯಚಿತ್ರದ ಒಂದು ನೋಟವನ್ನು ಹಂಚಿಕೊಂಡಿದೆ.
ಹಂಚಿಕೊಂಡಿರುವ ಟ್ರೇಲರ್ನಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು 1996ರ ಫ್ರೆಂಡ್ಶಿಪ್ ಕಪ್ ಅನ್ನು ನೆನಪಿಸಿಕೊಂಡರು, ಕೆನಡಾದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವೆ ಐದು ಪಂದ್ಯಗಳ ಸರಣಿಯನ್ನು ಆಡಲಾಗಿತ್ತು.
ಚಾಂಪಿಯನ್ಸ್ ಟ್ರೋಫಿಗೆ ಬುಮ್ರಾ ಅನುಮಾನ?; ಬದಲಿ ಬೌಲರ್ ಸಿದ್ಧಪಡಿಸಿದ ಬಿಸಿಸಿಐ!
ಈ ವಿಡಿಯೋದಲ್ಲಿ ಮಾತನಾಡಿದ ಸೌರವ್ ಗಂಗೂಲಿ “ಹೆಸರಿಗೆ ಮಾತ್ರ ಫ್ರೆಂಡ್ಶಿಪ್ ಟೂರ್ ಇತ್ತು, ಆದರೆ ಶೋಯೆಬ್ ಅಖ್ತರ್ ಗಂಟೆಗೆ 150 ಕಿಲೋಮೀಟರ್ ವೇಗವಾಗಿ ಬೌಲ್ ಮಾಡುತ್ತಿದ್ದಾರೆ, ಅದರಲ್ಲಿ ಸ್ನೇಹ ಎಲ್ಲಿದೆ?” ಎಂದು ಪ್ರಶ್ನೆ ಮಾಡಿದ್ದಾರೆ.
ಸೌರವ್ ಗಂಗೂಲಿ ಅವರ ಈ ಹೇಳಿಕೆಯನ್ನು ನೋಡಿ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಕೂಡ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಗಂಗೂಲಿ ಅವರನ್ನು ಟ್ಯಾಗ್ ಮಾಡಿ, “ದಾದಾ, ನೀವು ಅದ್ಭುತ, ನೀವು ಇಲ್ಲದೆ ಭಾರತೀಯ ಕ್ರಿಕೆಟ್ ಅಪೂರ್ಣ,” ಎಂದು ಬರೆದಕೊಂಡಿದ್ದಾರೆ.
Champions Trophy schedule: ಫೆ 23ಕ್ಕೆ ಭಾರತ-ಪಾಕ್ ಪಂದ್ಯ, ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿ!
ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ
8 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದೆ. ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ಟೂರ್ನಿ ನಡೆಯಲಿದೆ. ಆದರೆ, ಭಾರತ ತಂಡ ಇನ್ನೂ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ಭಾರತ ತಂಡ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡ
ಭಾರತೀಯ ಕ್ರಿಕೆಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಜಸ್ಪ್ರೀಪ್ ಭುಮ್ರಾಹ್ ಯಾದವ್, ಮೊಹಮ್ಮದ್ ಶಮಿ